ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿ ಬಂಧನ!

Editor Shivamogga Voice
2 Min Read

 

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡು, ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿ ಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧನಕ್ಕೊಳಪಡಿಸಿದೆ.

ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. ಈತನ ಬಂಧನದೊಂದಿಗೆ ಇದೂವರೆಗೂ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ೧೯ಕ್ಕೆ ಏರಿಕೆಯಾಗಿದೆ.

ಆರೋಪಿ ಮುಂಬೈ ವಿಮಾನ ನಿಲ್ದಾಣದ ಮೂಲಕ ಪರಾರಿಯಾ ಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾ ರಿಗಳು ಅಲ್ಲೇ ವಶಪಡಿಸಿಕೊಂ ಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ಸೂಚನೆ ಪ್ರಕಾರ ಭಾರತಕ್ಕೆ ಮರಳಿದ್ದ. ಇತ್ತೀಚೆಗೆ ಬಂಧಿತನಾಗಿದ್ದ ಮುಸ್ತಫಾ ಪೈಚಾ ರ್ ಎಂಬ ಆರೋಪಿಗೆ ಸಕಲೇ ಪುರದಲ್ಲಿ ವಾಸ್ತವ್ಯ ಹೂಡಲು ಸಹಕರಿಸಿದ್ದ ಎನ್ನಲಾ ಗಿದೆ.

ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮಾಜಿ ಕಾರ್ಯದರ್ಶಿ ಮತ್ತು ಸೇವಾ ತಂಡದ ಮುಖ್ಯಸ್ಥ ಪೈಚಾರ್ ಪ್ರಕರಣದ ಮುಖ್ಯ ಸಂಚುಕೋರ ನಾಗಿದ್ದ. ಈತ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ, ಆರೋಪಿಗಳ ತಂಡವನ್ನು ಒಟ್ಟುಗೂಡಿ, ಅಪರಾಧದ ಬಳಿಕ ಇತರರೊಂದಿಗೆ ಪರಾರಿಯಾಗಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ೨೦೦೨ರ ಜುಲೈ ೨೬ ರಂದು ರಾತ್ರಿ ೮ ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿ ದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ವನ್ನು ಎನ್‌ಐಎಗೆ ಹಸ್ತಾಂತರಿ ಸಲಾ ಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ ೨೧ ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್ ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು.

ಸೆಪ್ಟೆಂಬರ್ ೨೦೨೨ ರಲ್ಲಿ, ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಐದು ವರ್ಷಗಳ ನಿಷೇಧ ಹೇರಿತ್ತು. ಪಿಎಫ್‌ಐ ಮತ್ತು ಅದರ ಎಲ್ಲ ಅಂಗಸಂಸ್ಥೆಗಳು, ಸಹವರ್ತಿಗಳು ಹಾಗೂ ರಂಗಗಳನ್ನು ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (UಂPಂ) ಅಡಿ ನಿಷೇಧ ಹೊರಡಿಸಿತ್ತು. ಇದರೊಂದಿಗೆ ಯುಎಪಿಎ ಸೆಕ್ಷನ್ ೩೫ರ ಅಡಿ ನಿಷೇಧಕ್ಕೆ ಒಳಗಾದ ೪೨ ಭಯೋತ್ಪಾದನಾ ಸಂಘಟನೆಗಳ ಪಟ್ಟಿಗೆ ಪಿಎಫ್‌ಐ ಸೇರ್ಪಡೆ ಯಾಗಿದೆ.

Share This Article