ನನ್ನ ಗೆಲುವು – ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು

Editor Shivamogga Voice
2 Min Read

“ನನ್ನ ಗೆಲುವು – ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು”

 

ಬಿಜೆಪಿ ಭದ್ರಾವತಿ ನಗರ ಮಂಡಲ ಇಂದು ಪಟ್ಟಣದ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಖಾಸಗಿ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸತತ ಐವತ್ತು ದಿನಕ್ಕೂ ಅಧಿಕ ಸಮಯ ಮೀಸಲಿಟ್ಟು ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಹಿತೈಷಿಗಳಿಗೆ ಹೃದಯ ಪೂರ್ವಕವಾಗಿ ಕೃತಜ್ಞತೆ ತಿಳಿಸಲು ಹಮ್ಮಿಕೊಂಡಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು, ನೆರೆದಿದ್ದ ಆತ್ಮೀಯ ದೇವದುರ್ಲಭ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಮನಸ್ಸಿನ ಮಾತನ್ನು ಹಂಚಿಕೊಳ್ಳಲಾಯಿತು.

 

ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು. ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ.

 

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಜಾರಿಗೆ ತಂದ ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಉತ್ಸುಕನಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡುತ್ತೇನೆ.

 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ವಿಧಾನಪರಿಷತ್ ಶಾಸಕರಾದ ಡಾ. ಶ್ರೀ ಧನಂಜಯ ಸರ್ಜಿ ಅವರು, ಬಿಜೆಪಿ ಭದ್ರಾವತಿ ಅಧ್ಯಕ್ಷರಾದ ಶ್ರೀ ಧರ್ಮ ಪ್ರಸಾದ್ ಅವರು, ಪ್ರಮುಖರಾದ ಶ್ರೀ ಭಾನುಪ್ರಕಾಶ್ ಅವರು, ಶ್ರೀ ರುದ್ರೇಶ್ ಅವರು, ಶ್ರೀ ಹಾಲೇಶಪ್ಪ ಅವರು, ಶ್ರೀ ಮಂಜುನಾಥ್ ಅವರು, ಶ್ರೀ ಕದಿರೇಶ್ ಅವರು, ಶ್ರೀ ಆನಂದ್ ಅವರು, ಶ್ರೀ ಕರುಣಾಮೂರ್ತಿ ಅವರು, ಶ್ರೀಮತಿ ಶಾರದಾ ಅಪ್ಪಾಜಿ ಅವರು, ಶ್ರೀ ಚಂದ್ರಶೇಖರ್ ಅವರು ಸೇರಿದಂತೆ ಮಂಡಲದ ಎಲ್ಲಾ ಪ್ರಮುಖ ಕಾರ್ಯಕರ್ತರು, ಮುಖಂಡರು, ಗಣ್ಯರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article