ಶಿಕಾರಿಪುರದ ನಿರೀಕ್ಷಣಾ ಮಂದಿರದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪುರಸಭೆಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ

Editor Shivamogga Voice
1 Min Read

ಶಿಕಾರಿಪುರದ ನಿರೀಕ್ಷಣಾ ಮಂದಿರದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪುರಸಭೆಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಲಾಯಿತು.

 

-: ಈ ಕೆಳಕಂಡ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು:-

 

1.ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಪ್ರಸ್ತುತ ಸಾಗಿರುವ ಹಂತದ ಕುರಿತು ಮಾಹಿತಿ ಪಡೆಯಲಾಯಿತು.

 

2.ಮಳೆಗಾಲದ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಳೆಯಿಂದ ಯಾವುದೇ ರೀತಿಯ ತೊಂದರೆ ಎದುರಾಗದಂತೆ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಯಿತು.

 

3.ಆಸ್ತಿ ತೆರಿಗೆ, ಕಂದಾಯ ಮತ್ತು ಜಾತಿ ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಹಾಗೂ ಈ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಪ್ರಸ್ತಾಪಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ಕೊಡಲಾಯಿತು.

 

4.ಪಟ್ಟಣದ ನೈರ್ಮಲ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ, ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಚರ್ಚೆ ನಡೆಸಲಾಯಿತು.

 

5.ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ತೊಂದರೆ ಎದುರಾಗದಂತೆ ಕ್ರಮ ಕೈಗೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಲಾಯಿತು.

 

6.ಸಾರ್ವಜನಿಕರ ಕುಂದು ಕೊರತೆಗಳನ್ನು ತಕ್ಷಣವೇ ಆಲಿಸಿ ಅದರ ನಿವಾರಣೆಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಯಿತು.

 

ಇನ್ನೂ ಅನೇಕ ಅಭಿವೃದ್ಧಿ ವಿಚಾರಗಳ ಕುರಿತು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಶ್ರೀ ಗುರುಮೂರ್ತಿ ಅವರು, ಪುರಸಭೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಭರತ್ ಅವರು, ಪುರಸಭೆಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.

Share This Article